ಗತಿಸಿಹೋದ ಭಾರತೀಯ ಕಾಫಿ ಪರಂಪರೆಯ ಜಾಡಿನಲ್ಲಿ
ಶಿಥಿಲಗೊಳ್ಳುತ್ತಿದ್ದ ಮೊಘಲ್ ಸಾಮ್ರಾಜ್ಯದ ಅರಮನೆಗಳು. ಜಾಮಿಯಾ ಮಸೀದಿಯ ಪ್ರೌಢ ಗುಂಬಝಿನ ಆಚೆಗೆ ಮುಳುಗುವ ಸೂರ್ಯನ ಕೆಂಪು ಕಿರಣಗಳು ಹರಡಿದ್ದವು. ಹಳೆ ದೆಹಲಿಯ ಆಕಾಶದಲ್ಲಿ ಸಂಜೆಯ ಪ್ರಾರ್ಥನೆಯ ಕರೆ ಮೊಳಗಿದವು. ತಿರುವು ಮುರುವು ಹಾದಿಗಳಲ್ಲಿ ಹಾರನ್ ಮೊಳಗಿಸುತ್ತ ಸೈಕಲ್ ರಿಕ್ಷಾಗಳ…