ಚರಿತ್ರೆ ಮತ್ತು ವರ್ತಮಾನಗಳ ನಡುವೆ ದೆಹಲಿಯ ಸಾಂಸ್ಕೃತಿಕ ಸೊಬಗು
ದೆಹಲಿಯ ಸುಡು ಬಿಸಿಲಿನಲ್ಲಿ, ಹೇಗಾದರೂ ರೂಮನ್ನು ತಲುಪಿ ಬಿಡುವ ತರಾತುರಿಯಲ್ಲಿ ನಾನಿದ್ದೆ. ಹಳೆಯ ಟ್ಯಾಕ್ಸಿಯೊಂದರಲ್ಲಿ ಮಡದಿ ಮತ್ತು ಮಗು ನನ್ನ ಜೊತೆಗಿದ್ದರು. ಟ್ಯಾಕ್ಸಿಯು ಗಲ್ಲಿಯೊಂದರ ಸವೆದ ರಸ್ತೆಯ ಮೂಲಕ ಮುಂದೆ ಸಾಗುತ್ತಿತ್ತು. ನಗರದ ತಾಪಮಾನ ನೂರರ ಗಡಿ ದಾಟಿದಂತಿತ್ತು.…